ದಿನದ ಬ್ಲಾಗ್ - ಶೆಟ್ಟರ ಒಂದಿಷ್ಟು ಕನಸುಗಳು
ಜಿತೇಂದ್ರ
ಮಂಗಳವಾರ, 8 ಜುಲೈ 2008 (10:11 IST)
ಶೆಟ್ಟರ ಒಂದಿಷ್ಟು ಕನಸುಗಳು
‘ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ ಬದುಕು' ಅನ್ನೋದು ಶೆಟ್ಟರ ವಾದ.ಕನಸು ಕಾಣುವುದಲ್ಲಿ ಇವರು ನಿಸ್ಸೀಮರು ಅಂತ ಇಲ್ಲಿರುವ ಒಂದಿಷ್ಟು ಕನಸುಗಳೇ ಹೇಳುತ್ತಿವೆ. ಇಲ್ಲಿ ಈಗಷ್ಟೆ ಕಳೆದುಹೋದವನ ನೆನಪಿನ ಮಳೆಯಲ್ಲಿ ನೆನೆದ ಗುರುತಿದೆ. ಮನಸ್ಸಿಗೆ ಆಪ್ತವಾಗುವಂತ ಸರಳ ಶೈಲಿಯಲ್ಲಿಯೇ ಲೇಖಕರು ಎಲ್ಲವನ್ನು ನಿರೂಪಿಸುತ್ತಾ ಹೋಗಿದ್ದಾರೆ. ಬಾಗಲಕೋಟೆ ಹೋಳಿಯ ಸವಿ ನೆನಪು, ಹೀಗೂ ಒಂದು (ಆತ್ಮ)ಕಥೆ ಮುಂತಾದ ಲೇಖನಗಳು ಓದುತ್ತಲೇ ಇಷ್ಟವಾಗುತ್ತವೆ. ನಡುವೆ ಮುಂಬಯಿ ಬದುಕಿನ ಕಥೆ-ವ್ಯಥೆಗಳಿವೆ. ಜೊತೆಗೆ ಒಂದಿಷ್ಟು ಕವನ ರಸಾಯನ.
ಇದೆನ್ನೆಲ್ಲ ಸವಿಯಬೇಕಿದ್ದವರು ಇಲ್ಲಿಗೊಮ್ಮೆ ಹೋಗಿ ಬನ್ನಿ.
ಕನಸು, ಕವನ, ಲಹರಿ, ನೆನಪು.. ಎಲ್ಲವೂ ಸೇರಿ ಶೆಟ್ಟರ 'ಒಂದಿಷ್ಟು ಕನಸು' ಬ್ಲಾಗ್ ರೂಪುಗೊಂಡಿದೆ. 'ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ ಬದುಕು' ಎನ್ನುವ ಶೆಟ್ಟರು ಇಲ್ಲಿ ಮುಂಬಯಿ ಬದುಕಿನ ಕಥೆ-ವ್ಯಥೆಗಳನ್ನೂ ಪೋಣಿಸಿಕೊಟ್ಟಿದ್ದಾರೆ. ಸರಳವಾಗಿ, ಓದಿಸಿಕೊಂಡು ಹೋಗುವಂತೆ ಬರೆಯುವ ಶೆಟ್ಟರ ಬ್ಲಾಗನ ಒಂದು ಬರಹ ಇಲ್ಲಿದೆ.
ಶೆಟ್ಟರ,
ನಿಮ್ಮ ಕವನಗಳನ್ನ ಓದಿದರ, ನೀವು ಎಲ್ಲಾ ಹೊತ್ತು ಬೀಚಿನ್ಯಾಗ ಇರತೀರೇನೊ ಅಂತ ಅನಸ್ತದ.
ಆದರೂ ‘ಜ್ಯೋತಿ’ರ್ಗಮಯ ಅನ್ನೋ decision ತಕ್ಕೊಂಡೀರಲ್ಲ; ಅದs ಛಲೋ!
ಹಂಗೇನಿಲ್ರಿ ಕಾಕಾ,
ನಡು ನಡುವ ಆಫಿಸಿಗೆ ಹೋಗು ಪರಿಪಾಠನೂ ಇಟ್ಗೊಂಡಿನ್ರಿ,
ಜ್ಯೋತಿರ್ಗಮಯಕ್ಕೆ ತಮ್ಮ ಅನುಭದಮೃತದ ಆಶಿರ್ವಾದವೂ ಬೇಕು.
-ಶೆಟ್ಟರು
ಶೆಟ್ಟರ,
ನಮಸ್ತೆ.. .. ಅಮ್ಮನ ಹಬ್ಬಕ್ಕೆ ಆಮಂತ್ರಿಸಲು ನಿಮ್ಮ ಮನೆಗೆ ಬಂದೆ.. ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ.. ವಿವರಗಳಿಗೆ ನನ್ನ ಬ್ಲಾಗ್ http://minchulli.wordpress.com ನೋಡಿ. ಮರೆಯದೆ ಬನ್ನಿ… ನಿಮ್ಮ ಆಪ್ತರಿಗೆಲ್ಲ ಈ ವಿಚಾರ ಹೇಳಿ ಸಾಧ್ಯವಾದರೆ ಕರೆದುಕೊಂಡು ಬನ್ನಿ.
ಶುಭವಾಗಲಿ,
- ಶಮ, ನಂದಿಬೆಟ್ಟ